
ಭಾನುವಾರ ಜಮ್ಮುವಿನಲ್ಲಿ ಗರಿಷ್ಠ ತಾಪಮಾನ 37.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಮಾರ್ಚ್ ತಿಂಗಳ 76 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. IMD ಪ್ರಕಾರ, ಮಾರ್ಚ್ 31, 1945 ರಂದು ಹಿಂದಿನ ದಿನದ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು.
ಕಳೆದ ನಾಲ್ಕು ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ಕಡಿಮೆ ಒತ್ತಡದ ವ್ಯವಸ್ಥೆ ಇಲ್ಲದಿರುವುದು ಹಾಗೂ ಸ್ಥಳೀಯ ಹವಾಮಾನ ವ್ಯವಸ್ಥೆಗಳಲ್ಲಿ ಯಾವುದೇ ಬದಲಾವಣೆಯಾಗದೇ ಇರೋದ್ರಿಂದ ಹವಾಮಾನವು ಇನ್ನಷ್ಟು ಸ್ಪಷ್ಟವಾಗಿದೆ. ಮುಂದಿನ ಕೆಲವು ದಿನಗಳವರೆಗೆ ತಾಪಮಾನವು ಇನ್ನಷ್ಟು ಮೇಲುಗೈ ಸಾಧಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.
ಈ ನಡುವೆ ಶ್ರೀನಗರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಬಿಸಿಲು ಕಾಣಿಸಿಕೊಳ್ಳುತ್ತಿದೆ. ಅಲ್ಲದೇ ದಿನದ ತಾಪಮಾನವು 25 ಡಿಗ್ರಿ ಸೆಲ್ಸಿಯಸ್ವರೆಗೆ ದಾಖಲಾಗಿದೆ.