
ಬೆಂಗಳೂರು: ರಾಜಸ್ಥಾನದಲ್ಲಿ 76 ಲಕ್ಷ ಕುಟುಂಬಗಳಿಗೆ ಕೇವಲ 500 ರೂ.ಗೆ ಗ್ಯಾಸ್ ಸಿಲಿಂಡರ್ ವಿತರಿಸುತಿದ್ದೇವೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ಆಗಮಿಸಿದ್ದ ಅವರು ಮಾತನಾಡಿ, 100 ಯೂನಿಟ್ ಉಚಿತ ವಿದ್ಯುತ್, ಕೃಷಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಅಪಘಾತ ವಿಮೆಯ ಮೊತ್ತ 5 ರಿಂದ 10 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿದ್ದೇವೆ ಎಂದರು.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆ ಜಾರಿಗೆ ತಂದಿದೆ. ಕರ್ನಾಟಕದಲ್ಲಿಯೂ ಉತ್ತಮ ಪ್ರಣಾಳಿಕೆ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.