ಬಳ್ಳಾರಿ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಜ.25, 26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗಿದೆ.
76ನೇ ಗಣರಾಜ್ಯೋತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಜ.25 ಮತ್ತು ಜ.26ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಜ.26 ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆಯನ್ನು ಮಾಡಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರಾದ ಹೆಚ್.ಗಂಗಾಧರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.