ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ಸಿನಿಮಾ ಜೂನ್ 10ರಂದು ಕನ್ನಡ, ತಮಿಳು, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ದೇಶದ ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಈ ಚಿತ್ರದ ಪ್ರೀಮಿಯರ್ ಶೋ ಸೆಲೆಬ್ರಿಟಿಗಳಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಸಿನಿಮಾ ನೋಡಿದ ನಟಿ ರಮ್ಯಾ ಕಣ್ಣೀರಿಟ್ಟಿದ್ದಾರೆ. ಚಿತ್ರದ ಕುರಿತಂತೆ ಮಾತನಾಡಿದ ಅವರು, ಭಾವನಾತ್ಮಕವಾಗಿ ಎಲ್ಲರಿಗೂ ಚಾರ್ಲಿ ಚಿತ್ರ ಕನೆಕ್ಟ್ ಆಗುತ್ತದೆ. ನಾನು ಈ ಸಿನಿಮಾ ನೋಡುವಾಗ ಕಣ್ಣೀರು ಹಾಕಿದ್ದೇನೆ ಎಂದು ಹೇಳಿದ್ದಾರೆ.
ರಕ್ಷಿತ್ ಶೆಟ್ಟಿ ಒಂದೊಳ್ಳೆ ಸಿನಿಮಾ ಮಾಡಿದ್ದು ದೊಡ್ಡವರು, ಮಕ್ಕಳು ಎಲ್ಲರೂ ಈ ಸಿನಿಮಾವನ್ನು ಎಂಜಾಯ್ ಮಾಡಬಹುದಾಗಿದೆ ಎಂದು ಹೇಳಿರುವ ರಮ್ಯಾ, ಕನ್ನಡದಲ್ಲಿ ಇದೊಂದು ವಿಭಿನ್ನ ಪ್ರಯತ್ನ ಎಂದು ತಿಳಿಸಿದ್ದಾರೆ.