![](https://kannadadunia.com/wp-content/uploads/2020/08/Depositphotos_69433251_l-2015.jpg)
ಬಳ್ಳಾರಿ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ದೇವಸ್ಥಾನಗಳಲ್ಲಿ ಆ.14, 15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಲಾಗುವುದು.
ಜಿಲ್ಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲಾ ಧಾರ್ಮಿಕ ಸಂಸ್ಥೆಗಳು ಹಾಗೂ ದೇವಸ್ಥಾನಗಳಲ್ಲಿ ಆ.14 ಮತ್ತು ಆ.15ರಂದು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಆ.15ರಂದು ವಿಶೇಷ ಪೂಜೆ, ಪ್ರಾರ್ಥನೆ ವ್ಯವಸ್ಥೆ ಕೈಗೊಳ್ಳಬೇಕು ಎಂದು ಹಿಂದೂ ಧಾರ್ಮಿಕ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತ ಗಂಗಾಧರಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.