
ಬೆಂಗಳೂರು: 78 ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಸಡಗರ-ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣದ ಬಳಿಕ ಮಾತನಾಡಿನ ಸಿಎಂ ಸಿದ್ದರಾಮಯ್ಯ, ನಾಡಿನ ಜನತೆಗೆ 78 ನೇ ಸ್ವಾತಂತ್ರ್ಯೋತ್ಸವದ ಶುಭಾಷಯಗಳನ್ನು ಕೋರಿದರು. ದೇಶದ ಸ್ವಾಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.
ಪ್ರಾದೇಶಿಕ ಅಸಮತೋಲನ ನಿವಾರಿಸಲು ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ಅನುದಾನ ನೀಡಲಾಗಿದೆ. ಕಳೆದ 77 ವರ್ಷಗಳಲ್ಲಿ ಕರ್ನಾಟಕ ಮಹತ್ವದ ಪಾತ್ರ ಹೊಂದಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನರ ಜೀವನ ಮಟ್ಟ ಸುದಾರಿಸುವಂತೆ ಮಾಡಿದೆ. ಆರ್ಥಿಕ ಬೆಳವಣಿಗೆ ಮೂಲಕ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಿದೆ ಎಂದರು.