ನವದೆಹಲಿ: ದೇಶಾದ್ಯಂತ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ-ಸಡಗರ ಮನೆ ಮಾಡಿದೆ. ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ನೆರವೇರಿಸಿದ್ದಾರೆ. ಕೆಂಪುಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಬಾರಿ ಭಾಗವಹಿಸಿದ್ದು ವಿಶೇಷ.
ಕಳೆದ ಹತ್ತು ವರ್ಷಗಳಿಂದ ಲೋಕಸಭೆಯಲ್ಲಿ ವಿಪಕ್ಷ ಸ್ಥಾನವನ್ನು ಯಾರೂ ಅಲಂಕರಿಸಿರಲಿಲ್ಲ. ಈ ಬಾರಿ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಕೆಂಪುಕೋಟೆಯಲ್ಲಿ ನಡೆದ 78ನೇ ಸ್ವಾಂತ್ರಂತ್ರ್ಯೋತ್ಸವ ದಿನಾಚರಣೆಯಲ್ಲಿ ಪಾಲ್ಗೊಂಡರು.
2014ರಿಂದ 2024ರವರೆಗೆ ಯಾವುದೇ ವಿಪಕ್ಷಗಳು ಅಗತ್ಯ ಸಂಸದರ ಸಂಖ್ಯೆ ಹೊಂದಿಲ್ಲದ ಕಾರಣ ಯಾರೂ ಲೋಕಸಭೆಯಲ್ಲಿ ವಿಪಕ್ಷ ನಾಯಕನ ಹುದ್ದೆ ಅಲಂಕರಿಸಿರಲಿಲ್ಲ. ಈ ಬಾರಿ ಲೋಕಸಚೆ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಸಂಸದರ ಸಂಖ್ಯೆ ಹೆಚ್ಚಿಸಿಕೊಂಡುರುವುದರಿಂದ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಗಮನ ಸೆಳೆದರು.