7 ನೇ ವೇತನ ಆಯೋಗ : `ರಾಜ್ಯ ಸರ್ಕಾರಿ ನೌಕರರಿಗೆ’ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್| 7th Pay Commission

ಚಿತ್ರದುರ್ಗ : ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, 7 ನೇ ವೇತನ ಆಯೋಗದ ವರದಿ ಸಲ್ಲಿಕೆಯಾದ ನಂತರ ಜಾರಿ ಮಾಡುವ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರು ಕಾಯುತ್ತಿರುವ 7 ನೇ ವೇತನ ಆಯೋಗ ಜಾರಿ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು, ಈ ಬಗ್ಗೆ 7 ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

22 ವರ್ಷಗಳಲ್ಲೇ ರಾಜ್ಯದಲ್ಲಿ ಅತ್ಯಂತ ಕಡಿಮೆ ಮಳೆ ಆಗಿದೆ. ಈಗಾಗಲೇ 195 ತಾಲೂಕುಗಳನ್ನು ಬರಪೀಡತ ಪ್ರದೇಶ ಎಂದು ಘೋಷಿಸಲಾಗಿದೆ. ಕೃಷಿ ಸಚಿವರು ಸಭೆ ನಡೆಸಲಿದ್ದು ಬರ ಪೀಡಿತ ತಾಲೂಕುಗಳ  ಸಂಖ್ಯೆ ಹೆಚ್ಚಾಗಬಹುದು. ರಾಜ್ಯದಲ್ಲಿ ಒಟ್ಟು 42 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದೆ. ರೂ. 30 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ.  ಕೇಂದ್ರ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ರೂ.4860 ಕೋಟಿ ಪರಿಹಾರ ಕೇಳಿದ್ದೇವೆ. ಸದ್ಯ ಕೇಂದ್ರ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸಿದ್ದು. 11 ಜಿಲ್ಲೆಗಳಲ್ಲಿ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನೆಡೆಸಿ, ಅವಲೋಕಿಸಿ ವರದಿ ನೀಡಲಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read