alex Certify ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲಿದೆ ಭರ್ಜರಿ ಬಂಪರ್ ಸುದ್ದಿ

ಕೇಂದ್ರ ಸರ್ಕಾರಿ ನೌಕರರಿಗೆ ಡಿಎಗೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದ ಹೊರಬಿದ್ದಿದೆ. ಶೀಘ್ರದಲ್ಲೇ ಲಕ್ಷಾಂತರ ಉದ್ಯೋಗಿಗಳಿಗೆ ಹೆಚ್ಚಿದ ಡಿಎ ಸಿಗಲಿದೆ. ನ್ಯಾಷನಲ್ ಕೌನ್ಸಿಲ್ ಆಫ್ ಜಾಯಿಂಟ್ ಕನ್ಸಲ್ಟೇಟಿವ್ ಮೆಷಿನರಿ ಈ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಕೇಂದ್ರ ಸರ್ಕಾರಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಸಾಧ್ಯತೆಯಿದೆ.

ಈ ಸಭೆಯಲ್ಲಿ ನೌಕರರ ಡಿಎ ಕುರಿತು ಚರ್ಚೆ ನಡೆಯಲಿದೆ. ಹಣಕಾಸು ಸಚಿವಾಲಯದ ಹೊರತಾಗಿ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ಅಧಿಕಾರಿಗಳೂ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸರ್ಕಾರದೊಂದಿಗಿನ ಮೇ ತಿಂಗಳಲ್ಲಿಯೇ ಈ ಸಭೆ ನಡೆಯಬೇಕಿತ್ತು. ದೇಶಾದ್ಯಂತ ಹರಡಿರುವ ಕೊರೊನಾ ಬಿಕ್ಕಟ್ಟಿನಿಂದಾಗಿ ಈ ಸಭೆಯನ್ನು ಮುಂದೂಡಲಾಗಿತ್ತು.

ಈಗ ಜೂನ್ ಎರಡನೇ ಅಥವಾ ಮೂರನೇ ವಾರದಲ್ಲಿ ನಡೆಸುವ ಸಾಧ್ಯತೆ ದಟ್ಟವಾಗಿದೆ. ನೌಕರರ ಡಿಎ ಮೂರು ಕಂತುಗಳು  ಬಾಕಿ ಉಳಿದಿದ್ದು, ಅದನ್ನು ಸರ್ಕಾರ ಪಾವತಿಸಬೇಕಿದೆ. ಜನವರಿ 1, 2020, ಜುಲೈ 1, 2020 ಮತ್ತು ಜನವರಿ 1, 2021 ರ ನೌಕರರು ಮತ್ತು ಪಿಂಚಣಿದಾರರ ಡಿಎ ಮತ್ತು ಡಿಆರ್ ಬಾಕಿ ಉಳಿದಿದೆ.

ನೌಕರರಿಗೆ ಪ್ರಸ್ತುತ ಶೇಕಡಾ 17 ರ ದರದಲ್ಲಿ ಡಿಎ ಪಾವತಿಸಲಾಗುತ್ತಿದೆ. ಇದು ಶೇಕಡಾ 11ರಷ್ಟು ಹೆಚ್ಚಾಗಲಿದ್ದು, ಶೇಕಡಾ 28 ರಷ್ಟು ಡಿಎ ನೌಕರರಿಗೆ ಸಿಗುವ ಸಾಧ್ಯತೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...