alex Certify ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ಬಳಿಕ ವೇತನ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಬಜೆಟ್ ಬಳಿಕ ವೇತನ ಹೆಚ್ಚಳ

ನವದೆಹಲಿ: 2023 ರ ಬಜೆಟ್ ನಂತರ ಸರ್ಕಾರಿ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಕೇಂದ್ರ ಬಜೆಟ್ 2023 ರ ನಂತರ ಸರ್ಕಾರಿ ನೌಕರರ ವೇತನದ ಕನಿಷ್ಠ ವೇತನವನ್ನು ಹೆಚ್ಚಿಸುವ ಸಾಧ್ಯತೆಯಿದೆ. ಸರ್ಕಾರಿ ನೌಕರರ ವೇತನದ ಫಿಟ್‌ ಮೆಂಟ್ ಅಂಶವನ್ನು ಪರಿಷ್ಕರಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಬಹುದು.

ಫಿಟ್‌ ಮೆಂಟ್ ಅಂಶವನ್ನು ಬದಲಾಯಿಸುವಂತೆ ಕೇಂದ್ರ ನೌಕರರಿಂದ ಬಹಳ ದಿನಗಳಿಂದ ಬೇಡಿಕೆ ಇತ್ತು. ಈ ಕುರಿತು ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದ್ದು, 2024ರ ಮೊದಲು ಇದನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಬಜೆಟ್ ನಂತರ 2023ರ ಮಾರ್ಚ್‌ನಲ್ಲಿ ಜಾರಿಗೆ ತರುವುದಾಗಿ ಘೋಷಿಸಬಹುದು ಎಂದು ಮೂಲಗಳು ಹೇಳಿವೆ.

ಫಿಟ್‌ ಮೆಂಟ್ ಶೇಕಡ 2.57 ರಷ್ಟಿದ್ದು, ನೌಕರರು ಫಿಟ್‌ ಮೆಂಟ್ ಅಂಶವನ್ನು 3.68 ಕ್ಕೆ ಹೆಚ್ಚಿಸಲು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಈ ಏರಿಕೆಯೊಂದಿಗೆ ಕನಿಷ್ಟ ವೇತನ ಪ್ರಸ್ತುತ 18,000 ರೂ.ನಿಂದ 26,000 ರೂ.ಗೆ ಹೆಚ್ಚಳವಾಗಲಿದೆ.

ಜನವರಿ 1 ರಿಂದ ಜಾರಿಗೆ ಬರುವಂತೆ ಮಾರ್ಚ್ 2023 ರಲ್ಲಿ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಕೇಂದ್ರ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...