ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ವಿಧಾನಪರಿಷತ್ ಪಶ್ಚಿಮ ಶಿಕ್ಷಕರ ಮತಕ್ಷೇತ್ರ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಸವರಾಜ ಹೊರಟ್ಟಿ ಎಂಟನೇ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದಂತಾಗಿದೆ.
ಈ ಹಿಂದೆ ಟಿ.ಎನ್. ನರಸಿಂಹಮೂರ್ತಿ ನಾಲ್ಕು ಬಾರಿ ಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದು, ಆನಂತರ ಉತ್ತರಪ್ರದೇಶದಲ್ಲಿ ಓರ್ವರು ಐದು ಬಾರಿ ಗೆದ್ದಿದ್ದರು. ಬಸವರಾಜ ಹೊರಟ್ಟಿ 8ನೇ ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗುವುದರ ಮೂಲಕ ಹೊಸ ದಾಖಲೆ ಬರೆದಿದ್ದಾರೆ.
ತಮ್ಮ ಗೆಲುವಿನ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಸಭಾಪತಿ ಆಗಿದ್ದ ಕಾರಣಕ್ಕೆ ಕಾಲ್ಪನಿಕ ವೇತನ ಹಾಗೂ ಶಿಕ್ಷಕರ ನೇಮಕಾತಿ ಸಮಸ್ಯೆ ಕುರಿತು ಮಾತನಾಡಲು ಸಾಧ್ಯವಾಗಿರಲಿಲ್ಲ. ಆದರೆ ಇನ್ನುಮುಂದೆ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.