ಅಸ್ಸಾಂನ ದಿಬಾಲಾಂಗ್ ನಿಲ್ದಾಣದಲ್ಲಿ ಅಗರ್ತಲಾ-ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್‌ಪ್ರೆಸ್‌ನ ಕನಿಷ್ಠ 8 ಬೋಗಿಗಳು ಗುರುವಾರ ಹಳಿತಪ್ಪಿವೆ.
ಲುಮ್ಡಿಂಗ್ ವಿಭಾಗದ ಲುಮ್ಡಿಂಗ್-ಬರ್ದಾರ್‌ಪುರ ಹಿಲ್ ವಿಭಾಗದಲ್ಲಿ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳ ಬಗ್ಗೆ ವರದಿಯಾಗಿಲ್ಲ.
ಪವರ್ ಕಾರ್ ಮತ್ತು ರೈಲಿನ ಎಂಜಿನ್ ಸೇರಿದಂತೆ ಎಂಟು ಬೋಗಿಗಳು ಹಳಿತಪ್ಪಿದವು. ಆದಾಗ್ಯೂ, ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಗಾಯಗಳು ವರದಿಯಾಗಿಲ್ಲ ಎಂದು ಈಶಾನ್ಯ ಗಡಿ ರೈಲ್ವೆ ವಲಯದ ಸಿಪಿಆರ್‌ಒ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ವಿಭಾಗದ ಹಿರಿಯ ಅಧಿಕಾರಿಗಳೊಂದಿಗೆ ಅಪಘಾತ ಪರಿಹಾರ ರೈಲು ಮತ್ತು ಅಪಘಾತ ಪರಿಹಾರ ವೈದ್ಯಕೀಯ ರೈಲು ಈಗಾಗಲೇ ಲುಮ್ಡಿಂಗ್‌ನಿಂದ ಸ್ಥಳಕ್ಕೆ ತೆರಳಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದಾಗಿ ಲುಮ್ಡಿಂಗ್-ಬದರ್‌ಪುರ್ ಸಿಂಗಲ್ ಲೈನ್ ವಿಭಾಗದಲ್ಲಿ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ.
ರೈಲ್ವೆಯು ಲುಮ್ಡಿಂಗ್ – 03674 263120, 03674 263126 ನಲ್ಲಿ ಸಹಾಯವಾಣಿ ಸಂಖ್ಯೆಗಳನ್ನು ಸಹ ನೀಡಿದೆ.
ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ರೈಲ್ವೆಯೊಂದಿಗೆ ಸಮನ್ವಯ ಸಾಧಿಸುತ್ತಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.