alex Certify VIDEO | ಜನ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನ; 8 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VIDEO | ಜನ ವಸತಿ ಪ್ರದೇಶಕ್ಕೆ ಅಪ್ಪಳಿಸಿದ ವಿಮಾನ; 8 ಮಂದಿ ಸಾವು

ಜನವಸತಿ ಪ್ರದೇಶಕ್ಕೆ ವಿಮಾನ ಅಪ್ಪಳಿಸಿದ ಪರಿಣಾಮ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಕೊಲಂಬಿಯಾದ ಎರಡನೇ ಅತಿ ದೊಡ್ಡ ನಗರ ಮಿಡಲಿನ್ ನಲ್ಲಿ ನಡೆದಿದೆ. ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಓಲಾಯ ಹೆರಾರೆ ವಿಮಾನ ನಿಲ್ದಾಣದಿಂದ ಟೀಕ್ ಆಫ್ ಆದ ಈ ವಿಮಾನದಲ್ಲಿ ಆರು ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಎಲ್ಲರೂ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಏಳು ಮನೆಗಳು ಸಂಪೂರ್ಣವಾಗಿ ನಾಶವಾಗಿದ್ದು, ಆರು ಕಟ್ಟಡಗಳು ಹಾನಿಗೊಳಗಾಗಿವೆ. ಈ ಕಟ್ಟಡಗಳಲ್ಲಿದ್ದವರಿಗೆ ಯಾವುದೇ ಸಾವು ನೋವು ಸಂಭವಿಸಿದೆಯಾ ಎಂಬುದರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ವಿಮಾನ ಅಪಘಾತಕ್ಕೆ ಕಾರಣವೇನೆಂಬುದು ತಿಳಿದು ಬಂದಿಲ್ಲವಾದರೂ ಮಿಡಲಿನ್ ಮೇಯರ್ ಡೇನಿಯಲ್, ಎಂಜಿನ್ ದೋಷದ ಹಿನ್ನೆಲೆಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...