ಬೆಂಗಳೂರು : ಕೈಮಗ್ಗ ನೇಕಾರರನ್ನು ಪ್ರೋತ್ಸಾಹಿಸಲು ಪ್ರಸಕ್ತ ಸಾಲಿನಲ್ಲಿ ₹81 ಕೋಟಿ ವಿನಿಯೋಗಿಸಲಾಗುವುದು ಎಂದು ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಚಿವರು ‘ ನೇಕಾರರ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಈಗಾಗಲೇ ವರ್ಷಕ್ಕೆ 2 ರಿಂದ 3 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ. ಮೀಟರ್ ಕೈಮಗ್ಗದಿಂದ ತಯಾರಿಸಿದ ಉತ್ಪನ್ನಗಳ ಮೇಲೆ ಶೇ.20 ರಷ್ಟು ರಿಯಾಯಿತಿ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಶೇ.30 ರಿಂದ 40ರ ವರೆಗೆ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಮಾರುಕಟ್ಟೆ ಸಚಿವ ಶಿವಾನಂದ ಎಸ್.ಪಾಟೀಲ್ ತಿಳಿಸಿದ್ದಾರೆ.