ಈವರೆಗೆ ರಾಜ್ಯದಲ್ಲಿ 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಮುಂದಿನ ವರ್ಷದೊಳಗೆ ರಾಜ್ಯದ ಪ್ರತಿ ಹೋಬಳಿಯಲ್ಲಿ ವಸತಿ ಶಾಲೆ ಸ್ಥಾಪನೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಕ್ರಮ ಕೈಗೊಳ್ಳಲಾಗಿದೆ. ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದ್ದು, ಮುಂದಿನ ವರ್ಷದೊಳಗೆ ಎಲ್ಲಾ ಹೋಬಳಿಗಳಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿ ಸಾಧಿಸಬೇಕು ಎಂದು ತಿಳಿಸಿದ್ದಾರೆ.
ಹಾಸ್ಟೆಲ್ ಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರಿ ಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.