ಬೆಂಗಳೂರು : ಜನವರಿ 25 ರಿಂದ ಆರಂಭವಾಗಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ರಾಜ್ಯಾದ್ಯಂತ 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.
8,69,968 ವಿದ್ಯಾರ್ಥಿಗಳ ಪೈಕಿ 4,41,910 ಬಾಲಕರಾದರೆ, 4,28,058 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1 ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.
ಪರೀಕ್ಷಾ ಕೇಂದ್ರಗಳ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಲಾಗಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಅಗತ್ಯ ಪೊಲೀಸ್ ಭದ್ರತೆಯನ್ನು ನೀಡಲು ಶಿಕ್ಷಣ ಇಲಾಖೆ ಸಜ್ಜು ಮಾಡಿಕೊಂಡಿದೆ.
SSLC ಪರೀಕ್ಷೆ ವೇಳಾಪಟ್ಟಿ
25-03-2024: ಪ್ರಥನ ಭಾಷೆ ಪರೀಕ್ಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, )
27-03-2024: ಸಮಾಜ ವಿಜ್ಞಾನ (ಕೋರ್ ಸಬ್ಜೆಕ್ಟ್)
30-03-2024: ವಿಜ್ಞಾನ, ರಾಜ್ಯಶಾಸ್ತ್ರ
02-04-2024: ಗಣಿತ, ಸಮಾಜ ಶಾಸ್ತ್ರ
03-04-2024: ಅರ್ಥ ಶಾಸ್ತ್ರ
04-04-2024: ತೃತೀಯ ಭಾಷೆ ಪರೀಕ್ಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
06-04-2024: ದ್ವಿತೀಯ ಭಾಷೆ ಪರೀಕ್ಷೆ (ಇಂಗ್ಲಿಷ್, ಕನ್ನಡ)