ನವದೆಹಲಿ: ಕೊರೋನಾ ಸೋಂಕಿಗೆ ಕಡಿವಾಣ ಹಾಕಲು ಲಸಿಕೆ ನೀಡಲಾಗುತ್ತಿದ್ದು, ಹೀಗೆ ಕೋವಿಡ್ ಲಸಿಕೆ ಎರಡು ಡೋಸ್ ಪಡೆದವರಲ್ಲಿ ಸೋಂಕು ಬರುವ ಸಾಧ್ಯತೆ ತೀರಾ ಕಡಿಮೆ ಎಂದು ಹೇಳಲಾಗಿದೆ. ಆದರೆ, ಎರಡು ಡೋಸ್ ಪಡೆದುಕೊಂಡ ಬರೋಬ್ಬರಿ 87 ಸಾವಿರ ಜನರಿಗೆ ಕೊರೋನಾ ಸೋಂಕು ತಗಲಿದ್ದು, ಇವರಲ್ಲಿ ಶೇಕಡ 46 ಮಂದಿ ಕೇರಳ ರಾಜ್ಯಕ್ಕೆ ಸೇರಿದವರಾಗಿದ್ದಾರೆ.
ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆ ಸೇರಿದಂತೆ ಅನೇಕ ಕಾರಣಗಳಿಂದ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಸೋಂಕಿತರ ಸಂಖ್ಯೆ ಕೂಡ ಭಾರಿ ಹೆಚ್ಚಾಗಿತ್ತು. ಲಸಿಕೆ ನೀಡಿಕೆಗೆ ಹೆಚ್ಚಿನ ವೇಗ ನೀಡಲಾಗಿದ್ದು, ಹೆಚ್ಚಿನ ಸಂಖ್ಯೆಯ ಜನ 2 ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ. ಆದರೆ, ದೇಶದಲ್ಲಿ 2 ಡೋಸ್ ಲಸಿಕೆ ಪಡೆದ 87 ಸಾವಿರಕ್ಕೂ ಅಧಿಕ ಮಂದಿಗೆ ಮತ್ತೆ ಕೊರೊನಾ ಸೋಂಕು ಕಾಣಿಸಿಕೊಂಡಿರುವುದು ಆತಂಕ ತಂದಿದೆ. ಕೇರಳದಲ್ಲಿ ಎರಡನೇ ಡೋಸ್ ಪಡೆದ ಸುಮಾರು 40 ಸಾವಿರ ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಹೇಳಲಾಗಿದೆ.