ಬೆಂಗಳೂರು: ರಾಜ್ಯ ಪಠ್ಯಕ್ರಮ ಶಾಲೆಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ ನೀಡಿದ್ದು, ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಪ್ರಶ್ನಿಸಿ ಖಾಸಗಿ ಶಾಲೆಗಳು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದವು. ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ನ್ಯಾಯ ಪೀಠದಲ್ಲಿ ವಿಚಾರಣೆ ನಡೆಸಿದ್ದು, ಹೈಕೋರ್ಟ್ ವಿಭಾಗಿಯ ಪೀಠದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.
ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಮೂಲಕ ಸರ್ಕಾರ 5 ಮತ್ತು 8ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ನಿರ್ಧಸಿರುವುದನ್ನು ಖಾಸಗಿ ಶಾಲೆಗಳು ಪ್ರಶ್ನಿಸಿದ್ದವು. ಹೈಕೋರ್ಟ್ ಪರೀಕ್ಷೆಯನ್ನು ರದ್ದುಗೊಳಿಸಿದ್ದು, ಆದರೆ, ಸರ್ಕಾರ ಸಲ್ಲಿಸಿದ ಮೇಲ್ಮನವಿ ಆಲಿಸಿದ ಹೈಕೋರ್ಟ್ ವಿಭಾಗೀಯಪೀಠ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಮಾರ್ಚ್ 15 ರಂದು ಅನುಮತಿ ನೀಡಿದ್ದು, ಮಾರ್ಚ್ 27 ರಿಂದ 5 ಮತ್ತು 8ನೇ ತರಗತಿ ಪರೀಕ್ಷೆಗಳು ಆರಂಭವಾಗಿವೆ.