
ನವದೆಹಲಿ: ಕೇಂದ್ರ ಸರ್ಕಾರಿ ನೌಕರರ ವೇತನ, ಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಲೋಕಸಭೆಯ ಅಧಿವೇಶನದಲ್ಲಿ ಸೋಮವಾರ ಕಲಾಪದ ವೇಳೆ ಸಂಸದರಾದ ಕಂಗನಾ ರಣಾವತ್ ಮತ್ತು ಸಜ್ದಾ ಅಹಮದ್ ಅವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್ ಈ ಮಾಹಿತಿ ನೀಡಿದ್ದಾರೆ.
ಕೇಂದ್ರ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಿದೆಯೇ ಎಂದು ಪ್ರಶ್ನೆ ಕೇಳಲಾಗಿದ್ದು, ಇದಕ್ಕೆ ಸಚಿವರು ಉತ್ತರ ನೀಡಿ, 8ನೇ ವೇತನ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ತೀರ್ಮಾನಿಸಲಾಗುವುದು. ಎಂಟನೇ ವೇತನ ಆಯೋಗದ ಶಿಫಾರಸು ಕೈಗೊಂಡು ಅಂಗೀಕರಿಸಿದ ನಂತರ ಅದರ ಪರಿಣಾಮವನ್ನು ಮೌಲ್ಯಮಾಪನ ಮಾಡಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.