alex Certify ಸರ್ಕಾರಿ ಬಸ್ ಗೆ ಟೂರಿಸ್ಟ್ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು; 35 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಬಸ್ ಗೆ ಟೂರಿಸ್ಟ್ ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 9 ಜನ ಸಾವು; 35 ಮಂದಿ ಗಾಯ

ಕೇರಳದ ಪಾಲಕ್ಕಾಡ್‌ನಲ್ಲಿ ಭೀಕರ ಅಪಘಾತ ಸಂಭವಿಸಿ 9 ಜನ ಸಾವು ಕಂಡಿದ್ದು, 35 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಪಾಲಕ್ಕಾಡ್‌ ನ ವಡಕ್ಕೆಂಚೇರಿ ಪ್ರದೇಶದಲ್ಲಿ ಅಪಘಾತ ಸಂಭವಿಸಿದೆ.

ಪ್ರವಾಸಿ ವಾಹನವು ಕೇರಳ ಸರ್ಕಾರಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಪ್ರವಾಸಿ ಬಸ್ ವಡಕ್ಕೆಂಚೇರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ) ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಐವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಮೂವರು ಕೆಎಸ್‌ಆರ್‌ಟಿಸಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಗಾಯಗೊಂಡ 35 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವಾಸಿ ಬಸ್ ನಲ್ಲಿ ಎರ್ನಾಕುಲಂ ಜಿಲ್ಲೆಯ ಬಸೆಲಿಯೋಸ್ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಇದ್ದರು. ಅವರು ತಮಿಳುನಾಡಿನ ಊಟಿ ಕಡೆಗೆ ಹೊರಟಿದ್ದು, KSRTC ಬಸ್ ಕೊಯಮತ್ತೂರು ಕಡೆಗೆ ಹೋಗುತ್ತಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...