ಇಂದು ಬೆಳಗ್ಗೆ ಪಂಜಾಬ್ ನ ಲುಧಿಯಾನಾದ ಗಿಯಾಸ್‌ಪುರ ಪ್ರದೇಶದ ಸುವಾ ರಸ್ತೆಯಲ್ಲಿರುವ ಕಾರ್ಖಾನೆಯಿಂದ ಅನಿಲ ಸೋರಿಕೆಯಾಗಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಅಸ್ವಸ್ಥರಾಗಿದ್ದಾರೆ.
ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದು ಇಡೀ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸ್ಥಳೀಯರಿಗೆ ಮನವಿ ಮಾಡಲಾಗಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಸುಮಾರು 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಗ್ಯಾಸ್ ಸೋರಿಕೆಯಿಂದ ಅಸ್ವಸ್ಥರಾದವರನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ವರದಿಗಳ ಪ್ರಕಾರ, ಕೆಲವರು ರಸ್ತೆಯ ಮೇಲೆ ಶವವಾಗಿ ಬಿದ್ದಿರುವುದು ಕಂಡುಬಂದಿದೆ.
ಈ ಘಟನೆಯು ಸ್ಥಳೀಯರಲ್ಲಿ ಭಯವನ್ನುಂಟು ಮಾಡಿದ್ದು ಅವರಲ್ಲಿ ಕೆಲವರು ಜೀವ ಉಳಿಸಲು ತಮ್ಮ ಮನೆಗಳನ್ನು ತೊರೆದಿದ್ದಾರೆ.