ಮುಂಬೈ: ಮುಂಬೈನ ಉಪನಗರದ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎರಡು ಅಂತಸ್ತಿನ ವಸತಿ ಕಟ್ಟಡ ಕುಸಿದು, 9 ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ.
ಹಲವರು ಇನ್ನೂ ಕಟ್ಟಡಗಳ ಅವಶೇಷಗಳಡಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಮುಂಬೈ ಮಲಂಡ್ ಪ್ರದೇಶದಲ್ಲಿ 4 ಅಂತಸ್ತಿನ ಶಿಥಿಲಾವಸ್ಥೆಯಲ್ಲಿರುವ ಕಟ್ಟಡ ಮತ್ತೊಂದು ಕಟ್ಡಡದ ಮೇಲೆ ಬಿದ್ದಿದ್ದು, ಪಕ್ಕದ ಕಟ್ಟಡದಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿದೆ.
ಸ್ಥಳೀಯರು ತಂಡವನ್ನು ಸೇರಿಕೊಂಡು ಗಾಯಾಳುಗಳನ್ನು ರಕ್ಷಿಸಲು ನೆರವಾಗಿದ್ದಾರೆ. ಗಾಯಾಳುಗಳನ್ನು ಉಪನಗರ ಖಂಡೀವಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಎಂಸಿ ವಿಪತ್ತು ನಿರ್ವಹಣಾ ಕೋಶದ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.