![](https://kannadadunia.com/wp-content/uploads/2023/03/5f7741a5-de48-4ebd-b422-92d568a46902.jpg)
ರಸ್ತೆ ದಾಟುತ್ತಿದ್ದ 9 ವರ್ಷದ ಬಾಲಕನಿಗೆ ಹೈ ಸ್ಪೀಡ್ ನಲ್ಲಿ ಬರ್ತಿದ್ದ ಬೈಕ್ ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರೋ ದಾರುಣ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಅಗಸ್ತ್ಯಮುನಿ ನಗರ ಪ್ರದೇಶದ ಬುನಿಯಾಡಿ ವಾರ್ಡ್‌ನ ದೇವನಗರದಲ್ಲಿ ಈ ದುರಂತ ಘಟನೆ ನಡೆದಿದೆ.
ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ರಸ್ತೆಯಲ್ಲಿ ಮಗುವಿನ ಮೇಲೆ ಬೈಕ್ ಹೋಗಿರುವುದನ್ನ ತೋರಿಸಿದೆ.
ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮಗು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಬಾಲಕನ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.
ಮಗು ಬುನಿಯಾಡಿಯಲ್ಲಿ ನಡೆದ ಸತ್ಸಂಗದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದಾಗ ಅಂಗಡಿಯಿಂದ ಸಾಮಾನು ತೆಗೆದುಕೊಳ್ಳಲು ರಸ್ತೆ ದಾಟುತ್ತಿತ್ತು. ಈ ವೇಳೆ ಅಗಸ್ತ್ಯಮುನಿ ಕಡೆಯಿಂದ ವೇಗವಾಗಿ ಬಂದ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ.