ನವದೆಹಲಿ: ವೈದ್ಯಕೀಯ ಸ್ನಾತಕೋತ್ತರ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ 2021ರ ಪರೀಕ್ಷಾ ಫಲಿತಾಂಶ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ನೀಟ್ ಪರೀಕ್ಷಾ ಫಲಿತಾಂಶವನ್ನು ಎನ್ ಟಿ ಎ ಘೋಷಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿತ್ತು. ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, NEET-UG ಫಲಿತಾಂಶವನ್ನು ಘೋಷಿಸುವಂತೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ ತಿಳಿಸಿದೆ.
ಸೆ.12ರಂದು ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ತಮ್ಮ ಬುಕ್ ಲೆಟ್ ಹಾಗೂ ಒ ಎಂ ಆರ್ ಶೀಟ್ ಗಳು ಮಿಶ್ರಣವಾಗಿವೆ ಎಂದು ಆರೋಪಿಸಿ ಇಬ್ಬರು ಅಭ್ಯರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಎನ್ ಟಿ ಎ ಫಲಿತಾಂಶ ಘೋಷಿಸದಂತೆ ಕೋರ್ಟ್ ತಡೆ ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ನೀಟ್ ಫಲಿತಾಂಶ ಘೋಷಣೆಗೆ ಅನುಮತಿ ನೀಡಿದೆ.