ಬೆಂಗಳೂರು: ತನ್ನ ಪಾಲುದಾರಿಕೆ ಕಂಪನಿಯಲ್ಲಿ ಉದ್ಯೋಗಿಗಳಿಗೆ ಇಪಿಎಸ್ ಹಣ ಪಾವತಿಸದೇ ವಂಚಿಸಿದ ಆರೋಪದಲ್ಲಿ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ವಾರೆಮ್ಟ್ ಜಾರಿಯಾಗಿತ್ತು. ಪ್ರಕರನ ಸಂಬಂಧ ಹೈಕೋರ್ಟ್ ವಾರೆಂಟ್ ಗೆ ತಡೆಯಾಜ್ಞೆ ನೀಡಿದೆ.
ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ರಿಕವರಿ ನೋಟಿಸ್ ಹಾಗೂ ಬಂಧನ ವಾರೆಂಟ್ ಪ್ರಶ್ನಿಸಿ ರಾಬಿನ್ ಉತ್ತಪ್ಪ ಸಲ್ಲಿಸಿದ್ದ ಅರ್ಜಿ ವಿಚರಣೆ ನದೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ರಜಾಕಾಲದ ಪೀಠ, ರಾಬಿನ್ ಉತ್ತಪ್ಪ ವಿರುದ್ಧದ ವಾರೆಂಟ್ ಗೆ ತಡೆ ನೀಡಿದೆ.
ಅಲ್ಲದೇ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ವಿಚಾರಣೆ ಮುಂದೂಡಿದೆ.