ಬಳ್ಳಾರಿ : ಬಾಲ್ಯದಲ್ಲಿ ಕಾಡುವ ಮಾರಕ ರೋಗಗಳ ವಿರುದ್ದ ಲಸಿಕೆಗಳನ್ನು ತಾಯಂದಿರು ತಮ್ಮ ಮಕ್ಕಳಿಗೆ ತಪ್ಪದೆ ಹಾಕಿಸಿ, ಹುಟ್ಟಿನಿಂದ ಐದು ವರ್ಷದಲ್ಲಿ ಏಳು ಬಾರಿ ಮಕ್ಕಳಿಗೆ ಲಸಿಕೆ ಹಾಕಿಸಲು ಆಸ್ಪತ್ರೆಗೆ ಬರುವುದನ್ನು ಮರೆಯಬೇಡಿ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪರಿಣಾಮಕಾರಿ ಮಿಷನ್ ಇಂಧ್ರಧನುಶ್ 5.0 ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಪೂರ್ವ ಸಿದ್ದತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೂರನೇ ಸುತ್ತಿನ ಈ ಅವಧಿಯಲ್ಲಿ ಲಸಿಕೆ ವಂಚಿತವಾದ ಮಗುವಿಗೆ ಮೂರನೇ ಸುತ್ತಿನ ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಮಗು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಹಾಗೂ ಮಕ್ಕಳಿಗೆ ಈ ವಿಶೇಷ ಲಸಿಕೆಯ ಹಾಕಿಸಲು ಹಿಂದೇಟು ಹಾಕುವ ಫಲಾನುಭವಿಗಳ ಮನವೊಲಿಸಿ ತಪ್ಪದೇ ಲಸಿಕೆ ಹಾಕಿಸಬೇಕು ಎಂದು ಹೇಳಿದರು.
ಇದೊಂದು ಮಹತ್ವವಾದ ಕಾರ್ಯಕ್ರಮವಾಗಿದ್ದು ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಅಂಗನವಾಡಿ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ ಹಾಗೂ ಚುನಾಯಿತ ಪ್ರತಿನಿಧಿಗಳ ಬೆಂಬಲ ಪಡೆಯಿರಿ ಎಂದರು.
ಪ್ರಸ್ತುತ ಅಕ್ಟೋಬರ್ 09 ರಿಂದ 14 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಲಸಿಕೆ ಹಾಕುವ ಅಭಿಯಾನವನ್ನು ಕೈಗೊಳ್ಳಲಾಗಿದೆ.ಮುಖ್ಯವಾಗಿ 12 ಮಾರಕ ರೋಗಗಳು ಮತ್ತು ಅವುಗಳ ವಿರುದ್ದ ನೀಡುವ ಲಸಿಕೆ ಈ ರೀತಿ ಇವೆ. ಪೊಲೀಯೋ ರೋಗಕ್ಕೆ ಪೊಲಿಯೋ ದ್ರಾವಣ, ಬಾಲಕ್ಷಯಕ್ಕೆ ಬಿಸಿಜಿ ಲಸಿಕೆ, ಕಾಮಾಲೆ ರೋಗಕ್ಕೆ ಹೆಪಟೈಟಿಸ್ ಚುಚ್ಚುಮದ್ದು, ಗಂಟಲು ಮಾರಿ, ನಾಯಿಕೆಮ್ಮು ಧನುರ್ವಾಯು ರೋಟ ವೈರಸ್, ಹೆಚ್ ಇನ್ಪ್ಲ್ಯುಯೋಂಜಾ, ಕಾಮಾಲೆ ಗಾಗಿ ಪೆಂಟಾವೈಲೆಂಟ್ ಲಸಿಕೆ, ರೋಟಾವೈರಸ್ ಅತಿಸಾರಬೇದಿ ಗೆ ನಿಮೋಕಾಕಲ್ ಲಸಿಕೆ, ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ, ಹಾಗೂ ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ, ನೀಡಲಾಗುತ್ತದೆ.
ಇವೆಲ್ಲವುಗಳನ್ನು ಮಗುವಿನ ಒಂದು ವರ್ಷದೊಳಗೆ ಹಾಕಲಾಗುವುದು, ಕೆಲವು ರೋಗಗಳಿಗೆ ಅಂದರೆ ಪೊಲಿಯೋ , ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ದಡಾರ-ರೂಬೆಲ್ಲಾ ಮೆದುಳು ಜ್ವರ, ಕ್ಕೆ 16 ರಿಂದ 23 ತಿಂಗಳು ಒಳಗೆ ಹೆಚ್ಚುವರಿಯಾಗಿ ಬೂಸ್ಟರ್ ಡೋಸ್ ರೂಪದಲ್ಲಿ ನೀಡಲಾಗುವುದು. 5 ರಿಂದ 6 ವರ್ಷದಲ್ಲಿ ಪುನಃ ಗಂಟಲುಮಾರಿ, ನಾಯಿ ಕೆಮ್ಮು, ಧನುರ್ವಾಯು, ರೋಗಿಗಳಿಗೆ ಎರಡನೇಯ ಬಾರಿ ಬೂಸ್ಟರ್ ಡೋಸ್ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ವೈ ರಮೇಶ ಬಾಬು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿದೇಶಕರು ಕೆ.ಹೆಚ್.ವಿಜಯಕುಮಾರ್, ಅರ್ಸಿಹೆಚ್ ಅಧಿಕಾರಿ ಡಾ.ಅನೀಲಕುಮಾರ ವಿಶ್ವ ಅರೋಗ್ಯ ಸಂಸ್ಥೆಯ ಬಳ್ಳಾರಿ ಪ್ರತಿನಿಧಿ ಡಾ.ಆರ್ಎಸ್ ಶ್ರೀಧರ್, ಹಾಗೂ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸೇರಿದಂತೆ ಉಪಸ್ಥಿತರಿದ್ದರರು.