ಗೌರಿಬಿದನೂರು : ಕಲುಷಿತ ನೀರು ಸೇವಿಸಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಲ್ಲಿನಾಯಕನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಚಿಕ್ಕಹೊಸಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಈ ಬಾಲಕಿ ಕಳೆದ 1 ವಾರದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಈಕೆ ಶನಿವಾರ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಾಲಕಿಯ ಸಾವಿಗೆ ನಿಖರ ಕಾರಣ ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಲಾಗಿದೆ. ಮೇಲ್ನೋಟಕ್ಕೆ ಕಲುಷಿತ ನೀರು ಸೇವನೆಯೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.