ಮೊಬೈಲ್ ನೋಡಬೇಡ ಎಂದು ಪೋಷಕರು ಬೈದಿದ್ದಕ್ಕೆ 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಥಾಣೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಮೊಬೈಲ್ ಫೋನ್ ಅನ್ನು ಪದೇ ಪದೇ ನೋಡಬೇಡಿ ಎಂದು ತಾಯಿ ಪದೇ ಪದೇ ಬೆದರಿಕೆ ಹಾಕಿದ್ದರಿಂದ 15 ವರ್ಷದ ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾಳೆ.
ಕುಟುಂಬ ಸದಸ್ಯರು ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಅಂಬರ್ ನಾಥ್ ಪ್ರದೇಶದ ನಿವಾಸಿಯಾದ ಬಾಲಕಿ ಸೆಪ್ಟೆಂಬರ್ 26 ರಂದು ಇಲಿ ಪಾಷಾಣ ಸೇವಿಸಿದ್ದಳು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ನಂತರ ಮುಂಬೈನ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಆಕೆ ನಿಧನಳಾದಳು.. ವೈದ್ಯಕೀಯ ವರದಿಯ ಆಧಾರದ ಮೇಲೆ ಪೊಲೀಸರು ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಿದ್ದಾರೆ.