ಕೋಲಾರ : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
16 ವರ್ಷದ ಪ್ರಜ್ವಲ್ ಎಂಬ ಬಾಲಕನಿಗೆ ವಿದ್ಯುತ್ ತಗುಲಿ ಮೃತಪಟ್ಟಿದ್ದಾನೆ. ವಿದ್ಯುತ್ ಕಂಬಕ್ಕೆ ಗ್ರೌಂಡಿಗ್ ಹಾಕದ ಪರಿಣಾಮ ವಿದ್ಯುತ್ ಸೋರಿಕೆಯಾಗಿದ್ದು, ವಿದ್ಯುತ್ ಕಂಬದ ಬಳಿ ಹೋದ ಬಾಲಕನಿಗೆ ವಿದ್ಯುತ್ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಸ್ಕಾಂ ಅಧಿಕಾರಿಗಳ ನಿರ್ಲ್ಯಕ್ಷಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.