ಚಿಕ್ಕಬಳ್ಳಾಪುರ : ಉಪನ್ಯಾಸಕನ ಕಿರುಕುಳಕ್ಕೆ ಮನನೊಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮಲ್ಲಹಳ್ಳಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಗಜೇಂದ್ರ (17) ಎಂದು ಗುರುತಿಸಲಾಗಿದೆ. ಉಪನ್ಯಾಸಕನ ವಿರುದ್ಧ ಕಿರುಕುಳ ಆರೋಪ ಮಾಡಿ ಮೊಬೈಲ್ ನಲ್ಲಿ ವಿಡಿಯೋ ಮಾಡಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಗಜೇಂದ್ರ ಬಿಜಿಎಸ್ ಕಾಲೇಜಿನ ಪಾಲಿಟೆಕ್ನಿಕ್ ವಿದ್ಯಾರ್ಥಿ ಯಾಗಿದ್ದು, ಉಪನ್ಯಾಸಕ ಮಂಜುನಾಥ್ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.