alex Certify ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಾಳೆಯಿಂದ 2 ದಿನ ‘ಅಂತಾರಾಷ್ಟ್ರೀಯ ಸಮ್ಮೇಳನ’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀಕೃಷ್ಣದೇವರಾಯ ವಿವಿಯಲ್ಲಿ ನಾಳೆಯಿಂದ 2 ದಿನ ‘ಅಂತಾರಾಷ್ಟ್ರೀಯ ಸಮ್ಮೇಳನ’ ಆಯೋಜನೆ

ಬಳ್ಳಾರಿ : ಇಲ್ಲಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಫೆ.28 ಮತ್ತು 29 ರಂದು ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ವಿಶ್ವವಿದ್ಯಾಲಯದ ಸಮಾಜ ವಿಜ್ಞಾನ ನಿಕಾಯದ ವಿಭಾಗಗಳಾದ ಇತಿಹಾಸ ಮತ್ತು ಪುರಾತತ್ವಶಾಸ್ತ್ರ, ಸಮಾಜಕಾರ್ಯ, ಅರ್ಥಶಾಸ್ತ್ರ, ಸಮಾಜಶಾಸ್ತ್ರ, ರಾಜ್ಯಶಾಸ್ತ್ರ, ಮಹಿಳಾ ಅಧ್ಯಯನ, ಕಾನೂನು ವಿಭಾಗ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳ ಜಂಟಿ ಸಹಭಾಗಿತ್ವದಲ್ಲಿ ಎರಡು ದಿನಗಳ ಸಮ್ಮೇಳನ ನಡೆಯಲಿದೆ.

ಫೆ.28 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮ ಉದ್ಘಾಟಿಸುವರು.ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಅಶೋಕ್ ಆಲೂರ್ ಸಮ್ಮೇಳನದ ಮುಖ್ಯ ಭಾಷಣ ಮಾಡುವರು.

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಡಾ.ಅನಂತ್ ಝಂಡೇಕರ್ ಅವರು ಅಧ್ಯಕ್ಷತೆ ವಹಿಸುವರು.

ಕುಲಸಚಿವರಾದ ರುದ್ರೇಶ್.ಎಸ್.ಎನ್, ಕುಲಸಚಿವರು (ಮೌಲ್ಯಮಾಪನ) ಪ್ರೊ. ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ. ಸದ್ಯೋಜಾತಪ್ಪ ಸೇರಿದಂತೆ ವಿವಿಧ ವಿಭಾಗದ ಮುಖ್ಯಸ್ಥರು, ಡೀನರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿರುವರು. ವಿದೇಶ ಹಾಗೂ ದೇಶದ ಹಲವು ರಾಜ್ಯಗಳ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿ ತಮ್ಮ ಸಂಶೋಧನಾ ಪಾಂಡಿತ್ಯದ ಕುರಿತು ಪ್ರಬಂಧ ಮಂಡಿಸುವರು.

ಸಮ್ಮೇಳನದಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಸಮ್ಮೇಳನದಂದು ನೇರ ನೋಂದಣಿಗೆ ಅವಕಾಶ ಇದೆ ಎಂದು ಸಮ್ಮೇಳನದ ಸಂಚಾಲಕರಾದ ಪ್ರೊ. ಗೌರಿ ಮಾಣಿಕ್ ಮಾನಸ ಹಾಗೂ ಪ್ರೊ.ತಿಪ್ಪೇಸ್ವಾಮಿ ಹೆಚ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...