ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆಬಾವಿ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲು ರಕ್ಷಣಾ ಸಿಬ್ಬಂದಿಗಳು ಸತತವಾಗಿ ನಿನ್ನೆ ರಾತ್ರಿಯಿಂದ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಂಡೆ ಸಿಕ್ಕಿರುವ ಹಿನ್ನೆಲೆ ರಕ್ಷಣಾ ಕಾರ್ಯ ವಿಳಂಬವಾಗಿದ್ದು, ಮಗು ಕಾಲು ಅಲ್ಲಾಡಿಸುತ್ತಿರುವ ದೃಶ್ಯ ಸೆರೆಯಾಗಿದೆ. ಇನ್ನೂ ಅರ್ಧಗಂಟೆಯಲ್ಲಿ ಮಗುವಿನ ರಕ್ಷಣಾ ಕಾರ್ಯ ಮುಗಿಯಲಿದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆಯಿಂದ ಕಾರ್ಯಾಚರಣೆ ನಡೆಸಿದೆ. ಸುಮಾರು 20 ಅಡಿ ಆಳದಲ್ಲಿ ಬುಧವಾರ (ಏಪ್ರಿಲ್ 3) ಸಂಜೆ 5.30ರ ಸುಮಾರಿಗೆ ಸಾತ್ವಿಕ್ ಕೊಳವೆಬಾವಿಗೆ ಬಿದ್ದಿದ್ದು, ಕೊಳವೆಬಾವಿ ಪಕ್ಕ 5 ಅಡಿಯ ಸುರಂಗ ಕೊರೆದು, ಜೆಸಿಬಿಯಿಂದ ಅಗೆಸಿ ರಾತ್ರಿಯಿಡೀ ಕಾರ್ಯಾಚರಣೆ ನಡೆಸಲಾಗುತ್ತಿದೆ.