ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಕೆಲವರಿಗೆ ಹಣ ಬಂದಿಲ್ಲ. ಕೆಲವರು ನಮ್ಮ ಅಕೌಂಟ್ ಗೆ 2-3 ತಿಂಗಳಿನಿಂದ ಹಣ ಬರುತ್ತಿಲ್ಲ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದರ ನಡುವೆ ಯಜಮಾನಿಯರಿಗೆ ಮತ್ತೊಂದು ಶಾಕ್ ಎದುರಾಗಿದೆ. ಹೌದು, ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ.
ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇಂತಹ 1.78 ಲಕ್ಷ ಮಹಿಳೆಯರನ್ನು ಪತ್ತೆ ಮಾಡಲಾಗಿದೆ. ಅಂತಹವರಿಗೆ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸದೇ ಇದ್ದವರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.