ಬೆಂಗಳೂರು : ಅಕ್ರಮವಾಗಿ ‘ಬಿಪಿಎಲ್’ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರ ಬಿಗ್ ನೀಡಿದೆ. ತಾವು ಉತ್ತಮ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದು, ಅಂತಹ ಕಾರ್ಡುಗಳನ್ನು ರದ್ದು ಮಾಡಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ.
ಬಿಪಿಎಲ್ ಕಾರ್ಡ್ ಹೊಂದಿ ಸರ್ಕಾರಿ ಯೋಜನೆಗಳನ್ನು ಪಡೆಯಲು ಹೊರಟಿದ್ದ ನಾಗರಿಕರ ಮೇಲೆ ಆಹಾರ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ. ಆಹಾರ ಇಲಾಖೆಯು ಈಗಾಗಲೇ ಸರ್ವೇ ನಡೆಸಿ 35 ಸಾವಿರಕ್ಕೂ ಹೆಚ್ಚು ಕಾರ್ಡ್ಗಳನ್ನು ರದ್ದುಗೊಳಿಸಿ ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಶಾಕ್ ನೀಡಿದೆ. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವ ಮೂಲಕ ಅಕ್ರಮವಾಗಿ ಕಾರ್ಡ್ ಹೊಂದುವವರ ವಿರುದ್ಧದ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೆರವಾಗಲು ಸರ್ಕಾರಗಳು ಬಿಪಿಎಲ್ ಕಾರ್ಡ್ ಮೂಲಕ ಪಡಿತರ ವಿತರಣೆ ಮಾಡುತ್ತಿದೆ. ಆದರೆ ಕೆಲವರು ತಾವು ಅನುಕೂಲ ಸ್ಥಿತಿಯಲ್ಲಿದ್ದರೂ ಸಹ ಸುಳ್ಳು ಮಾಹಿತಿ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆಯುತ್ತಿದ್ದು, ಅಂತಹ ಕಾರ್ಡುಗಳನ್ನು ರದ್ದು ಮಾಡಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ.
ಜೀವನೋಪಾಯಕ್ಕೆ ಟ್ಯಾಕ್ಸಿಯಾಗಿ ವಾಹನ ಹೊಂದಿರುವವರನ್ನು ಹೊರತುಪಡಿಸಿ ಸ್ವಂತ ಬಳಕೆಗೆ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರು ಎಂದು ಪರಿಗಣಿಸಲಾಗಿದ್ದು, ಇದೀಗ ಇಂತಹ ವಾಹನಗಳ ಮಾಹಿತಿ ನೀಡುವಂತೆ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ.
ಅಲ್ಲದೆ ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಸಾರ್ವಜನಿಕ ವಲಯದ ಸಂಸ್ಥೆಗಳು ಅಥವಾ ಸರ್ಕಾರದ ನೆರವಿನ ಸ್ವಾಯತ್ತ ಸಂಸ್ಥೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಅಧಿಕ ಭೂಮಿ ಹೊಂದಿರುವ ಕುಟುಂಬಗಳು ಹಾಗೂ 1.2 ಲಕ್ಷಕ್ಕಿಂತ ಹೆಚ್ಚು ವಾರ್ಷಿಕ ಆದಾಯ ಹೊಂದಿರುವ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆಯಲು ಅನರ್ಹರು ಎಂದು ಪರಿಗಣಿಸಲಾಗಿದ್ದು, ಇದನ್ನು ಪರಿಶೀಲಿಸಿ ಅಂಥವರ ಕಾರ್ಡ್ ರದ್ದುಗೊಳಿಸಲು ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಒಂದು ಸುಳ್ಳು ದಾಖಲೆಗಳನ್ನು ನೀಡಿ ಅಕ್ರಮವಾಗಿ ಕಾರ್ಡ್ ಪಡೆದಿದ್ದರೆ ಅಂತಹವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡು ದಂಡ ಕೂಡ ವಿಧಿಸಲಿದೆ.
ಮಾನದಂಡಗಳು
1) ವಾರ್ಷಿಕ ಆದಾಯ 1.2 ಲಕ್ಷ ಹೊಂದಿರುವ ಕುಟುಂಬಗಳು
2) 3 ಹೆಕ್ಟರಿಗಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳು
3) ವೈಟ್ ಬೋರ್ಡ್ ಕಾರ್ ಹೊಂದಿರುವ ಕುಟುಂಬಗಳು
4) ನಗರ ಪ್ರದೇಶಗಳಲ್ಲಿ 1000 Sq.ft ಗಿಂತ ಹೆಚ್ಚಿನ ವಿಸ್ತೀರ್ಣದ ಮನೆ ಹೊಂದಿದ್ದರೆ ಬಿಪಿಎಲ್ ಕಾರ್ಡ್ ಇಲ್ಲ
5) ಕುಟುಂಬಸ್ಥರಲ್ಲಿ ಯಾರಾದರೂ ಸರ್ಕಾರಿ ನೌಕರಿಯಲ್ಲಿದ್ದರೆ ಬಿಪಿಎಲ್ ಕಾರ್ಡ್ ಇಲ್ಲ
6) ವಾಣಿಜ್ಯ ತೆರಿಗೆ, ಆದಾಯ ತೆರಿಗೆ, ಐಟಿ ರಿಟರ್ನ್ ಸಲ್ಲಿಸುವ ಕುಟುಂಬಗಳು BPL ಕಾರ್ಡ್ ಹೊಂದಿದ್ದರೆ ಅವುಗಳು ರದ್ದಾಗಲಿವೆ.
ಹೊಸ APL ,BPL ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ -ಸಚಿವ ಮುನಿಯಪ್ಪ ಸ್ಪಷ್ಟನೆ
ಹೊಸ ಪಡಿತರ ಚೀಟಿಗೆ ಅರ್ಜಿ ( APL. BPL ) ಸಲ್ಲಿಸಲು ಅನುಮತಿ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸದ್ಯಕ್ಕೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅನುಮತಿ ಇಲ್ಲ, ಕಾರಣಏನೆಂಬುದನ್ನು ಸದ್ಯದಲ್ಲೇ ಹೇಳುತ್ತೇನೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.