alex Certify ಬೆಂಗಳೂರು : ಮಾಜಿ ಉದ್ಯೋಗಿಯಿಂದಲೇ ಕಂಪನಿಗೆ ‘ಬಾಂಬ್ ಬೆದರಿಕೆ’ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು : ಮಾಜಿ ಉದ್ಯೋಗಿಯಿಂದಲೇ ಕಂಪನಿಗೆ ‘ಬಾಂಬ್ ಬೆದರಿಕೆ’ ಕರೆ

ಬೆಂಗಳೂರು : ಬೆಂಗಳೂರಿನ ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು, ಶ್ವಾನ ದಳದ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನ ಇಕೋ ಸ್ಪೇಸ್ IBDO ಎನ್ನುವ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೇವೆ, ಸ್ವಲ್ಪ ಸಮಯದಲ್ಲಿ ಬ್ಲಾಸ್ಟ್ ಆಗುತ್ತೆ ಎಂದು ಬೆದರಿಕೆಯೊಡ್ಡಲಾಗಿದೆ. ಈ ಹಿನ್ನೆಲೆ ಆತಂಕ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಶ್ವಾನ ದಳ, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಹುಸಿ ಬಾಂಬ್ ಕರೆ ಎಂದು ಗೊತ್ತಾಗಿದೆ.

ನಂತರ ತನಿಖೆ ನಡೆಸಿದಾಗ ಅಚ್ಚರಿ ವಿಚಾರ ಬೆಳಕಿಗೆ ಬಂದಿದ್ದು, ಕಂಪನಿಯ ಹಳೆ ಉದ್ಯೋಗಿ ಈ ಕರೆ ಮಾಡಿದ್ದಾನೆ ಎಂಬುದು ಗೊತ್ತಾಗಿದೆ. ಕೆಲವು ದಿನಗಳ ಹಿಂದೆ ಕೆಲಸ ಬಿಟ್ಟಿದ್ದ ಉದ್ಯೋಗಿ ಹುಸಿ ಬಾಂಬ್ ಕರೆ ಮಾಡಿದ್ದಾನೆ. ಸದ್ಯ, ಮಾಜಿ ಉದ್ಯೋಗಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...