alex Certify BREAKING : ಸಾವನ್ನೇ ಗೆದ್ದು ಬಂದ ಪೋರ ; ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸುರಕ್ಷಿತವಾಗಿ ಪತ್ತೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಸಾವನ್ನೇ ಗೆದ್ದು ಬಂದ ಪೋರ ; ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸುರಕ್ಷಿತವಾಗಿ ಪತ್ತೆ..!

ಹಾವೇರಿ: ಹಾವೇರಿಯಲ್ಲಿ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರಾಕಾರ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿತ್ತು. ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗವೇ ಈ ದುರಂತ ಸಂಭವಿಸಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿರುವ ಬಾಲಕನಾಗಿದ್ದು, ಸದ್ಯ ಆತನನ್ನು ರಕ್ಷಿಸಲಾಗಿದೆ.

ಘಟನ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧ ನಡೆಸಿದ್ದರು.ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...