ಮಲವಿಯ ಮಾಜಿ ಉಪರಾಷ್ಟ್ರಪತಿ ಸೌಲೋಸ್ ಚಿಲಿಮಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದ ಶೋಕತಪ್ತರಿಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ದಕ್ಷಿಣ ಮಲವಿಯ ಎನ್ಚೆಯು ಜಿಲ್ಲೆಯಲ್ಲಿ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಚಿಲಿಮಾ ಅವರ ಶವವನ್ನು ಸಾಗಿಸುತ್ತಿದ್ದ ವಾಹನವೊಂದು ಶೋಕತಪ್ತರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಚಿಲಿಮಾ ಕಳೆದ ವಾರ ವಿಮಾನ ಅಪಘಾತದಲ್ಲಿ ನಿಧನರಾದರು. ಅವರ ದೇಹವನ್ನು ಸೋಮವಾರ ಸಮಾಧಿ ಮಾಡುವ ಮೊದಲು ಭಾನುವಾರ ಮಧ್ಯಾಹ್ನ ಎನ್ಚೆಯುನ ಅವರ ಸ್ವಗ್ರಾಮ ಎನ್ಸಿಪೆಗೆ ತರಲಾಯಿತು ಎಂದು ಮೂಲಗಳು ಮಾಹಿತಿ ನೀಡಿದೆ.