ಬೆಳಗಾವಿ : ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ.
ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಸೊಬರದ ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ, ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ