alex Certify BREAKING : ಲೋಕೋಪಯೋಗಿ ಇಲಾಖೆಯಲ್ಲೇ ವಿಷ ಸೇವಿಸಿ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲೋಕೋಪಯೋಗಿ ಇಲಾಖೆಯಲ್ಲೇ ವಿಷ ಸೇವಿಸಿ ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನ

ಬೆಳಗಾವಿ : ಗುತ್ತಿಗೆದಾರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯ ಕೋಟೆ ಆವರಣದಲ್ಲಿರುವ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ.

ಎಕ್ಸಿಕ್ಯೂಟಿವ್ ಇಂಜಿನಿಯರ್ S.S.ಸೊಬರದ ಮುಂದೆ ಗುತ್ತಿಗೆದಾರ ನಾಗಪ್ಪ ಬಂಗಿ ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಸೊಬರದ ರಸ್ತೆ ನಿರ್ವಹಣೆ ಬಿಲ್ ಮಂಜೂರು ಮಾಡದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಗುತ್ತಿಗೆದಾರ ನಾಗಪ್ಪ ಬಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೂಡಲೇ ನಾಗಪ್ಪ ಬಂಗಿ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ, ಸದ್ಯ ನಾಗಪ್ಪ ಬಂಗಿ ಪ್ರಾಣಾಪಾಯದಿಂದ ಪಾರಾಗಿದ್ದು ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ  ಚಿತ್ರ

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...