ನವದೆಹಲಿ: ಭಾರತದ ಕೊವ್ಯಾಕ್ಸಿನ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಮನ್ನಣೆ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ತಾಂತ್ರಿಕ ಸಲಹಾ ಸಮಿತಿಯಿಂದ ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ.
ಭಾರತದಲ್ಲಿ ತಯಾರಿಸಿದ ಈ ಲಸಿಕೆ ಪಡೆದವರು ಬೇರೆ ದೇಶಗಳಿಗೂ ಹೋಗಬಹುದು. ಇಂದು WHO ನ ತಾಂತ್ರಿಕ ಸಲಹಾ ಸಮಿತಿ ಭಾರತ್ ಬಯೋಟೆಕ್‌ನ ಕೋವಾಕ್ಸಿನ್‌ಗೆ ತುರ್ತು ಬಳಕೆಗೆ ಶಿಫಾರಸು ಮಾಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಸಮಿತಿಯು ಕಳೆದ ವಾರ ಹೈದರಾಬಾದ್ ಮೂಲದ ಸಂಸ್ಥೆಯಿಂದ ಹೆಚ್ಚುವರಿ ಸ್ಪಷ್ಟೀಕರಣಗಳನ್ನು ಕೇಳಿತ್ತು.
ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿದ COVAXIN ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ ಎಂದು UN ಆರೋಗ್ಯ ಸಂಸ್ಥೆ ಟ್ವೀಟ್‌ನಲ್ಲಿ ತಿಳಿಸಿದೆ. WHO ನ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಸಿಂಗ್ ಅವರು ಕೋವಾಕ್ಸಿನ್ ಅನುಮತಿ ನೀಡಲಾಗಿರುವುದಕ್ಕೆ ಭಾರತವನ್ನು ಅಭಿನಂದಿಸಿದ್ದಾರೆ.