ಮಂಡ್ಯ : ಕೆಎಸ್ ಆರ್ ಟಿಸಿ ಬಸ್ ಡಿಪೋ ಎದುರೇ ಚಾಲಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.
ವರ್ಗಾವಣೆಯಿಂದ ಬೇಸತ್ತು ಸಚಿವರಿಗೆ ಬೈದು ನಂತರ ಕೆಎಸ್ ಆರ್ ಟಿಸಿ ಬಸ್ ಡಿಪೋ ಎದುರೇ ಚಾಲಕ ಜಗದೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು ಬಂದಿದೆ.
ಜೆಡಿಎಸ್ ಪರ ಪ್ರಚಾರ ನಡೆಸಿದ್ದಕ್ಕೆ ನನ್ನನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜಕೀಯ ದ್ವೇಷದಿಂದ ಸಚಿವ ಚೆಲುವರಾಯಸ್ವಾಮಿ ನನ್ನನ್ನು ವರ್ಗಾವಣೆ ಮಾಡಿಸಿದ್ದಾರೆ ಎಂದು ಆರೋಪಿಸಿ ಸಚಿವರಿಗೆ ಬೈದು ನಂತರ ಜಗದೀಶ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಆತನನ್ನು ನಾಗಮಂಗಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.