ಚಿಕ್ಕಮಗಳೂರು : ಮಳೆ ನಂಬಿ ಈರುಳ್ಳಿ ಬೆಳೆದಿದ್ದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.
ಮೃತರನ್ನು ಕಡೂರು ತಾಲೂಕಿನ ಗಿರಿಯಾಪುರದ ಗ್ರಾಮದ ಸತೀಶ್ (48) ಎಂದು ಗುರುತಿಸಲಾಗಿದೆ. ಅವರು ಕೃಷಿ ಪತ್ತಿನ ಸಹಕಾರ ಸಂಘ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದರು. ಮಳೆ ಕೈ ಕೊಟ್ಟ ಹಿನ್ನೆಲೆ ಈರುಳ್ಳಿ ಬೆಳೆ ಸಂಪೂರ್ಣ ನಾಶವಾಗಿತ್ತು.ಸಾಲಕ್ಕೆ ಹೆದರಿ ಸತೀಶ್ (48) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.