ಬೆಂಗಳೂರು : ಮಾಜಿ ಸಚಿವ, ರಾಣೆಬೆನ್ನೂರಿನ ಮುಖಂಡ ಆರ್ ಶಂಕರ್ ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ನಂತರ ಮಾತನಾಡಿದ ಸಚಿವ ಆರ್ ಶಂಕರ್ ತಾಲೂಕು ಅಭಿವೃದ್ದಿಗಾಗಿ ನಾನು ಬಿಜೆಪಿ ಹೋಗಿದ್ದೆ, ಆದರೆ ನನ್ನ ನಂಬಿಕೆಯನ್ನು ಕತ್ತು ಹಿಸುಕಿ ಕೊಲ್ಲಲಾಯಿತು ಎಂದು ಆರೋಪ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ರಾಜ್ಯ ರಾಜಕಾರಣದಲ್ಲಿ ಪಕ್ಷಾಂತರ ಪರ್ವ ಮುಂದುವರೆದಿದೆ.
ರಾಣೇಬೆನ್ನೂರಿನ ಮಾಜಿ ಶಾಸಕರಾದ ಶ್ರೀ ಆರ್. ಶಂಕರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ನಮ್ಮ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.