ತುಮಕೂರು : ಹೆರಿಗೆ ಮಾಡಿಸಲು 3 ಸಾವಿರ ಲಂಚಕ್ಕೆ ಕೈಯೊಡ್ಡಿದ್ದ ಸರ್ಕಾರಿ ವೈದ್ಯನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಡಾ.ಹರಿಪ್ರಸಾದ್ ಎಂಬ ವೈದ್ಯ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆರಿಗೆ ಮಾಡಿಸಲು ಹನುಮಂತಪ್ಪ ಎಂಬುವರ ಹಣಕ್ಕೆ ಬೇಡಿಯಿಟ್ಟಿದ್ದರು. ಆದ್ದರಿಂದ ಆತ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದನು.
ಹೆರಿಗೆಗೂ ಮುನ್ನ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ವೈದ್ಯ ಡಾ.ಹರಿಪ್ರಸಾದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಸಂಬಂಧ ತುಮಕೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.