alex Certify ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭೀಕರ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ

ಟ್ರಕ್ ಹಾಗೂ ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಈ ಅಪಘಾತ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಬೇರಾ ಛೇದಕ ಪ್ರದೇಶದಲ್ಲಿ ನಡೆದಿದ್ದು, ಎರಡೂ ವಾಹನಗಳು ಜೋರಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿ ಅದರಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಅಪಘಾತದ ರಭಸಕ್ಕೆಕಾರು ನಜ್ಜುಗುಜ್ಜಾಗಿದ್ದಲ್ಲದೆ, ಬೆಂಕಿ ಹೊತ್ತಿಕೊಂಡಿದೆ. ಅಲ್ಲದೇ, ಟ್ರಕ್ ಸಹ ಪಲ್ಟಿ ಹೊಡೆದಿದೆ. ಕಾರು ಜೈಪುರದಿಂದ ಅಮರಪುರ ಮಾರ್ಗವಾಗಿ ಸಂಚಾರ ಮಾಡುತ್ತಿತ್ತು. ಘಟನೆಯಲ್ಲಿ ದೇವಿಲಾಲ್, ಅವರ ಪತ್ನಿ, ಮಗ ಹಾಗೂ ಮಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಇವರು ರಾಜಸ್ಥಾನದ ರಾಜಸಮಂದ್ ಜಿಲ್ಲೆಯ ರೈಲ್ ಮಾಂಗ್ರಾದವರು ಎಂದು ಗುರುತಿಸಲಾಗಿದೆ.

ಭೀಕರ ಅಪಘಾತವಾಗಿದ್ದರಿಂದಾಗಿ ಹಾಗೂ ಕಾರು ಸಂಪೂರ್ಣವಾಗಿ ಜಖಂಗೊಂಡ ಹಿನ್ನೆಲೆಯಲ್ಲಿ ಮೃತರು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಅವರ ಶವಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಮೃತರ ಸಂಬಂಧಿಕರು ಬಂದ ನಂತರ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಿಳಿಸಿರುವ ಪೊಲೀಸರು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...