ಬೆಂಗಳೂರು : ಫೆಬ್ರವರಿ 17ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗಿಯಾಗುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಅಡ್ಯಾರ್ನಲ್ಲಿರುವ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ನಾಯಕರು ಹಾಗೂ ಕಾರ್ಯಕರ್ತರಲ್ಲಿ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆ ಯಲ್ಲಿ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಈ ಸಮಾವೇಶ ನಡೆಸಲಾಗುತ್ತಿದೆ ಎಂದು ತಿಳಿಸಿದರು.