ಬೆಂಗಳೂರು : ಬೆಂಗಳೂರಿನ ಆರ್ ಟಿ ನಗರದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಎಲ್ಲರನ್ನು ರಕ್ಷಣೆ ಮಾಡಲಾಗಿದೆ.
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದ 2 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ 40 ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.
ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಟ್ಟಡದಲ್ಲಿ ಸಿಲುಕಿಕೊಂಡಿದ್ದು, ಎಲ್ಲರನ್ನೂ ಏಣಿ ಮೂಲಕ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ ಹೊರಗೆ ಕರೆ ತಂದಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.