ಭೋಪಾಲ್: ಭೋಪಾಲ್ ನ ವಲ್ಲಭ ಭವನ ರಾಜ್ಯ ಸಚಿವಾಲಯದಲ್ಲಿ ಶನಿವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ವೀಡಿಯೊದಲ್ಲಿ ಭಾರಿ ಎತ್ತರದ ಕಪ್ಪು ಹೊಗೆಯ ಆಕಾಶಕ್ಕೆ ಹೋಗುವುದನ್ನು ಕಾಣಬಹುದು.
ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯುತ್ತಿದೆ. ವರದಿಗಳ ಪ್ರಕಾರ, ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಬಗ್ಗೆ ಮಾತನಾಡಿದ ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್, “ವಲ್ಲಭ ಭವನದ ಹಳೆಯ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನನ್ನ ಗಮನಕ್ಕೆ ಬಂದಿದೆ. ಘಟನೆಯ ಬಗ್ಗೆ ವಿವರವಾದ ಮಾಹಿತಿಯನ್ನು ಸಂಗ್ರಹಿಸಬೇಕು ಮತ್ತು ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ . ಅಂತಹ ಯಾವುದೇ ಘಟನೆ ಮತ್ತೆ ಸಂಭವಿಸದಂತೆ ನೋಡಿಕೊಳ್ಳಲು ನಾವು ನಿರ್ದೇಶನಗಳನ್ನು ನೀಡಿದ್ದೇವೆ ಎಂದರು.