ನವದೆಹಲಿ: ದೆಹಲಿಯ ಲಜಪತ್ ನಗರದ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ.ಬೆಂಕಿ ನಂದಿಸಲು 12 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (ಡಿಎಫ್ಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಳಿಗ್ಗೆ 11.30 ಕ್ಕೆ ಬೆಂಕಿಗೆ ಸಂಬಂಧಿಸಿದ ಕರೆ ಬಂದಿದೆ. ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.