ಬೆಂಗಳೂರು : ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7ರಂದು 2 ಹಂತದಲ್ಲಿ ಮತದಾನ ನಡೆಯಲಿದೆ.
ಈ ಬಗ್ಗೆ ಮಾಹಿತಿ ನೀಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ‘ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಕರ್ನಾಟಕದಲ್ಲಿ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ಪ್ರಕ್ರಿಯೆ ನಡೆಯಲಿದ್ದು, ಎರಡನೇ ಹಂತದ ಮತದಾದನ ಮೇ 7 ರಂದು ನಡೆಯಲಿದೆ ಎಂದರು.
ಕರ್ನಾಟಕದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. ದಕ್ಷಿಣ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಉತ್ತರ ಕರ್ನಾಟಕ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಏಪ್ರಿಲ್ 26 ರಂದು ಈ ಜಿಲ್ಲೆಗಳಲ್ಲಿ ಮತದಾನ
ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ.
ಮೇ 7 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಮತದಾನ
ಕರ್ನಾಟಕದಲ್ಲಿ ಮೇ 7 ರಂದು ಒಟ್ಟು 14 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಬೆಳಗಾವಿ, ಬಳ್ಳಾರಿ, ಚಿಕ್ಕೋಡಿ, ಹಾವೇರಿ-ಗದಗ, ಕಲಬುರಗಿ, ಬೀದರ್, ಹುಬ್ಬಳಿ – ಧಾರವಾಡ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಾಗಲಕೋಟೆ, ವಿಜಯಪುರ.
ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನ ನಡೆಯಲಿದೆ. ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಘೋಷಿಸಿದ್ದಾರೆ.